ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು(ಜೂ.21) ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಪಾಲ್ಗೊಂಡ ರಾಜ್ಯ ಕೃಷಿ ಸಚಿವ ಎನ್ . ಚಲುವರಾಯ ಸ್ವಾಮಿ ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು ಭೂ ಪ್ರದೇಶ ಮತ್ತು ಶೇ 8 ರಷ್ಟು ಉತ್ಪಾದನೆ ಹೊಂದಿದೆ. ರಾಜ್ಯದ 31.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಎನ್ .ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ 31 ರಷ್ಟು ಕೊಡುಗೆ ನೀಡುತ್ತಿದೆ ಎಂದು ಅವರು ವಿವರಿಸಿದರು.
ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ರಾಜ್ಯ ಕೃಷಿ ಸಚಿವರು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟರು.
ಪ್ರಸಕ್ತ ವರ್ಷ 2024-25 ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಳ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದ 64.2 ಕೋಟಿ ರೂ ಮೊತ್ತದ ಬೇಳೆ ಕಾಳು ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು ಶೀಘ್ರದಲ್ಲೇ ವೈಯಕ್ತಿಕವಾಗಿ ಬೇಟಿ ಮಾಡುವುದಾಗಿ ತಿಳಿಸಿ, ಮುಂದೆಯೂ ನಿರಂತರ ಸಹಕಾರಕ್ಕೆ ಮನವಿ ಮಾಡಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…