ರಾಜ್ಯ

ಕೇಂದ್ರ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ; ರಾಜ್ಯದ ಯೋಜನೆಗಳಿಗೆ ಸಹಕಾರ ನೀಡಲು ಎನ್.ಚಲುವರಾಯಸ್ವಾಮಿ ಮನವಿ

ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು(ಜೂ.21) ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಪಾಲ್ಗೊಂಡ ರಾಜ್ಯ ಕೃಷಿ ಸಚಿವ ಎನ್ . ಚಲುವರಾಯ ಸ್ವಾಮಿ ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.

ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು‌‌. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು ಭೂ ಪ್ರದೇಶ ಮತ್ತು ಶೇ 8 ರಷ್ಟು ಉತ್ಪಾದನೆ ಹೊಂದಿದೆ. ರಾಜ್ಯದ 31.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಎನ್ .ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ 31 ರಷ್ಟು ಕೊಡುಗೆ ನೀಡುತ್ತಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ರಾಜ್ಯ ಕೃಷಿ ಸಚಿವರು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟರು.

ಪ್ರಸಕ್ತ ವರ್ಷ 2024-25 ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಳ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ 64.2 ಕೋಟಿ ರೂ ಮೊತ್ತದ ಬೇಳೆ ಕಾಳು ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು ಶೀಘ್ರದಲ್ಲೇ ವೈಯಕ್ತಿಕವಾಗಿ ಬೇಟಿ ಮಾಡುವುದಾಗಿ ತಿಳಿಸಿ, ಮುಂದೆಯೂ ನಿರಂತರ ಸಹಕಾರಕ್ಕೆ ಮನವಿ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

6 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

6 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

7 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

7 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

7 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

9 hours ago