ಮಂಗಳೂರು: ವಿಧಾನಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಆರ್‌ಎಸ್‌ಎಸ್ ಮೂಲದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಈ ಮೂಲಕ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ತೀವ್ರ ನಿರಾಸೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದರು.
ಆದರೆ ಬಿಜೆಪಿ ಹೈಕಮಾಂಡ್ ಕಿಶೋರ್ ಕುಮಾರ್ ಅವರಿಗೆ ಮಣೆ ಹಾಕಿದ್ದು, ಟಿಕೆಟ್ ಘೋಷಣೆ ಮಾಡಿದೆ.
ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸ್ಥಾನಕ್ಕೆ ಅಕ್ಟೋಬರ್.21ರಂದು ಉಪಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್.3 ಕೊನೆಯ ದಿನವಾಗಿದೆ.