Mysore
21
scattered clouds

Social Media

ಬುಧವಾರ, 04 ಫೆಬ್ರವರಿ 2026
Light
Dark

ಪ್ರವಾಸಿ ತಾಣವಾಗಿ ವಿಧಾನಸೌಧ: ವೀಕ್ಷಣೆಗೆ ಶುಲ್ಕ

ಬೆಂಗಳೂರು: ವಿಧಾನಸೌಧದಲ್ಲಿ ಟೂರ್‌ ಗೈಡ್‌ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡಲು ಮುಂದಾಗಿದೆ.

ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆ ಮಾಡಲು ಟೂರ್‌ ಗೈಡ್‌ ಏರ್ಪಡಿಸಲಾಗಿದ್ದು, ಇದು ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಇರಲಿದೆ.

ವಿಧಾನಸೌಧವನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವೀಕ್ಷಣೆ ಮಾಡಬಹುದಾಗಿದೆ.

ಇನ್ನು ವಿಧಾನಸೌಧ ಕಟ್ಟಡಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧ ಕಟ್ಟಡ ವೀಕ್ಷಿಸಲು guided tour ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

 

 

Tags:
error: Content is protected !!