ರಾಜ್ಯ

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ, ವಿದ್ವಾನ್‌ ಅಂಗಡಿಮಾರು ರಾಮಚಂದ್ರ ಭಟ್ಟ (೭೨) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ ೮ ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಅವರ ಅಪೇಕ್ಷೆಯಂತೆ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಹಸ್ತಾಂತರಿಸಲಾಯಿತು.

ಜ್ಯೋತಿಷ್ಯ ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತವಾಗಿದ್ದ ರಾಮಚಂದ್ರ ಭಟ್‌ , ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ೫ನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ದಿವಾನರಾಗಿಯೂ ಸಹ ಸೇವೆ ಸಲ್ಲಿಸಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

4 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

14 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

30 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

44 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago