ರಾಜ್ಯ

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ

ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್‌ ವಿಜಯ್‌ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ಮಾಡಲಾಗಿದೆ.

ವಿಜಯ್‌ ಶಂಕರ್‌ ಅವರು 1988ರಲ್ಲಿ ಮೈಸೂರಿನಿಂದ ಆಯ್ಕೆಯಾಗಿ 12ನೇ ಲೋಕಸಭೆಗೆ ಪ್ರವೇಶಿಸಿದ್ದರು. ಬಳಿಕ 1994 ರಲ್ಲಿ ಹುಣಸೂರಿನಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿದ್ದರು, ಜತೆಗೆ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಇನ್ನೂ 2004 ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ 14ನೇ ಲೋಕಸಭೆಗೆ ಪ್ರವೇಶಿಸಿದ್ದರು. ಉಳಿದಂತೆ ಅವರನ್ನು 2010ರಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. 2016ರ ವರೆಗೂ ಎಂಎಲ್‌ಸಿಯಾಗಿ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಮತ್ತೆ ಬಿಜೆಪಿಗೆ ಘರ್‌ ವಾಪ್ಸಿಯಾಗಿದ್ದರು.

ರಾಜ್ಯದ ಮಾಜಿ ಸಚಿವ ಈಗ ಮೇಘಲಯದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವುದಕ್ಕೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ಮೇಘಾಲಯ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಮಾಜಿ ಸಂಸದರು ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕರಾದ ಶ್ರೀ ಸಿ.ಹೆಚ್.ವಿಜಯಶಂಕರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಸಮಸ್ತ ಕನ್ನಡಿಗರ ಪರವಾಗಿ ವಿಜಯ ಶಂಕರ್ ಅವರಿಗೆ ಶುಭಾಶಯಗಳನ್ನು ಕೋರುತ್ತಾ, ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಅವರ ಹೆಜ್ಜೆಗಳು ನಿರಂತರವಾಗಿ ಸಾಗಲಿ. ಮೇಘಾಲಯದ ಜನರಿಗೆ ಅವರಿಂದ ಒಳ್ಳೆಯದಾಗಲಿ ಎಂದು ಮನಸಾರೆ ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

14 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

16 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

16 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

16 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

18 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

19 hours ago