ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು.
ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ.
ಹಾಸಿಗೆ, ದಿಂಬು ಇಲ್ಲದೇ ಪರದಾಟ ನಡೆಸುತ್ತಿರುವ ದರ್ಶನ್, ಜೈಲಾಧಿಕಾರಿಗಳ ಮುಂದೆ ಅಂಗಲಾಚಿದರೂ ಏನು ಲಾಭವಿಲ್ಲ. ಕೂರಲೂ ಒಂದು ಕುರ್ಚಿಯೂ ಇಲ್ಲದೇ ಒದ್ದಾಡುತ್ತಿದ್ದೇನೆ ಎಂದು ಪತ್ನಿ ವಿಜಯಲಕ್ಷ್ಮೀ ಮುಂದೆ ಸಂಕಷ್ಟ ತೋಡಿಕೊಂಡಿದ್ದಾರೆ.
ಇದನ್ನೂ ಓದಿ:-ರಾಜ್ಯದಲ್ಲಿ ಮತ್ತೆ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಈ ಹಿನ್ನೆಲೆಯಲ್ಲಿ ನೀನು ಜೈಲಿಗೆ ಬರಬೇಡ. ನಮ್ಮ ಹಣೆಬರಹದಲ್ಲಿ ಇರೋಹಂಗೆ ಆಗುತ್ತೆ ಎಂದು ವಿಜಯಲಕ್ಷ್ಮೀ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೈಲಿನಲ್ಲಿ ಯಾವುದೇ ಸೌಲಭ್ಯ ಸಿಗದೇ ತೀವ್ರ ಸಂಕಷ್ಟ ಅನುಭವಿಸುತ್ತಿರುವ ನಟ ದರ್ಶನ್ ಪರಿಸ್ಥಿತಿ ಕಂಡು ಕುಟುಂಬಸ್ಥರು ಕೂಡ ಕಣ್ಣೀರು ಹಾಕಿದ್ದಾರೆ.





