ರಾಜ್ಯ

ಹುಡುಗಿ ನೋಡಿ ವಾಪಸ್‌ ಬರುವಾಗ ಭೀಕರ ಅಪಘಾತ: ಐವರ ದುರ್ಮರಣ

ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಷಿನ್‌ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್‌ ಬಳಿ ಈ ಘಟನೆ ನಡೆದಿದೆ. ಮೃತರು ವಿಜಯಪುರದ ಜಿಲ್ಲೆಯ ಅಲಿಯಾಬಾದ್‌ ನಿವಾಸಿಗಳು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಐವರು ಅಸ್ಕಿ ಗ್ರಾಮಕ್ಕೆ ಕನ್ಯೆ ನೋಡಲು ಹೋಗಿದ್ದರು. ವಾಪಸ್‌ ಬರುವಾರ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ನಜ್ಜು-ಗುಜ್ಜಾಗಿದ್ದು, ಇಬ್ಬರು ಮಹಿಳೆಯರು ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈಲ್ವೆ ಹುದ್ದೆ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…

16 mins ago

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಡ್ರೋನ್‌ ಪ್ರತಾಪ್‌ಗೆ ಜಾಮೀನು ಮಂಜೂರು

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್‌ ಪ್ರತಾಪ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…

34 mins ago

9 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…

1 hour ago

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್‌ ಅವರು ನಾಡಿನ…

2 hours ago

5 ಹಾಗೂ 8ನೇ ತರಗತಿ ಪರೀಕ್ಷೆಗೆ ಮಹತ್ವದ ತೀರ್ಮಾನ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…

2 hours ago

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…

2 hours ago