ರಾಜ್ಯ

ನೀಟ್‌ ಫಲಿತಾಂಶ : ವಿಜಯಪುರದ ನಿಖಿಲ ಸೊನ್ನದ ರಾಜ್ಯಕ್ಕೆ ಪ್ರಥಮ

ವಿಜಯಪುರ : ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ನೀಟ್‌(ರಾಷ್ಟ್ರೀಯ ಪ್ರವೇಶ ಪರೀಕ್ಷೆ)ನಲ್ಲಿ ರಾಷ್ಟಕ್ಕೆ 17ನೇ ರ‍್ಯಾಂಕ್‌ ಹಾಗೂ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ್ದಾರೆ.

ಇವರು ವಿಜಯಪುರದ ಸಂಜೀವಿನಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ದಂಪತಿ ಡಾ.ಸಿದ್ದಪ್ಪ ಸೊನ್ನದ ಮತ್ತು ಡಾ.ಮೀನಾಕ್ಷಿ ಸೊನ್ನದ ಅವರ ಪುತ್ರರಾಗಿದ್ದಾರೆ.

ನಿಖಿಲ್‌ ಸೊನ್ನದ ಅವರು 720ಅಂಕಗಳಿಗೆ 670 ಅಂಕ ಗಳಿಸಿದ್ದಾರೆ.

ನೀಟ್‌ನಲ್ಲಿ ಉತ್ತಮ ಅಂಕದ ನಿರೀಕ್ಷೆ ಇತ್ತು. ಆದರೆ, ರಾಷ್ಟ್ರಮಟ್ಟದಲ್ಲಿ 17 ನೇ ಸ್ಥಾನ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಹಳ ಖುಷಿಯಾಗಿದೆ. ಏಮ್ಸ್‌ನಲ್ಲಿ ಪದವಿ ಓದಬೇಕೆಂದುಕೊಂಡಿರುವೆ. ನರರೋಗ ಶಸ್ತ್ರಚಿಕಿತ್ಸಕ ಆಗಬೇಕು ಎಂಬ ನನ್ನ ಆಶಯವಾಗಿದೆ. ನಮ್ಮ ಕಾಲೇಜಿ ಧ್ಯೇಯ ವಾಕ್ಯವಾದ ಶ್ರಮದೇವ ಜಯತೇ ಎಂಬುದು ನನ್ನನ್ನು ಪ್ರತಿದಿನ ಕಠಿಣ ಶ್ರಮ ಹಾಕಲು ಪ್ರೇರೇಪಣೆ ನೀಡಿತು. ಪ್ರತಿದಿನಿ ಬೆಳಿಗ್ಗೆ 7 ರಿಂದ ಸಂಜೆ 7ರ ತನಕ ತರಗತಿ ಹಾಗೂ ನೀಟ್‌ ಕೋಚಿಂಗ್‌ ಇರುತ್ತಿತ್ತು. ಕಾಲೇಜಿನ ಉಪನ್ಯಾಸಕರು ನಮಗೆ ಉತ್ತೇಜನ ನೀಡುತ್ತಿದ್ದರು ಎಂದು ನಿಖಿಲ್‌ ಸೊನ್ನದ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

21 seconds ago

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

2 hours ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

2 hours ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

2 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

3 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

3 hours ago