ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಯಲ್ಲಿ ಹೆಂಡ ಖರೀದಿಗೆ ಬಳಸಲಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯವೇ ಹೇಳಿದೆ.
ಈ ಎಲ್ಲಾ ಹಗರಣಗಳನ್ನು ಒಪ್ಪಿಕೊಂಡು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ರಾಜ್ಯದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರು ನಿಮ್ಮ ಮೇಲೆ ವಿಶ್ವಾಸವಿಟ್ಟು 136 ಸ್ಥಾನ ನೀಡಿದರು. ಅವರ ಹಣವನ್ನೇ ತಿಂದು ಅವರಿಗೇ ಅನ್ಯಾಯ ಮಾಡಿದ್ದೀರಿ. ನಿಮ್ಮ ಪಾಪದ ಕೊಡ ತುಂಬಿದೆ. ಮೈಸೂರಿನ ಮುಡಾ ಹಗರಣ ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದೀರಿ ಎಂದು ಆರೋಪಿಸಿದರು.
ರಾಜ್ಯದಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಭ್ರಷ್ಟಾಚಾರದ ವಿರುದ್ಧ ಬಿಜೆಪಿಯವರು ಸುಮ್ಮನೆ ಕೂರಲ್ಲ ಅಂತಾ ಗೊತ್ತಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ತೀವ್ರ ಆತಂಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…