ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಕಾನೂನಿನ ಮುಂದೆ ಎಲ್ಲರೂ ಒಂದೇ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದರು.
ಹೈಕೋರ್ಟ್‌ನಲ್ಲಿ ಸುದೀರ್ಘವಾದ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇರುವುದು ಸಾಬೀತಾಗಿದೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಅವರು ರಾಜೀನಾಮೆ ನೀಡುವ ವಿಶ್ವಾಸವಿದೆ ಎಂದು ಹೇಳಿದರು.