ದಾವಣಗೆರೆ: ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತು ಬಹಿರಂಗವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಬಂದಿವೆ.
ಹೀಗಿರುವಾಗ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಎಂ.ಪಿ.ರೇಣುಕಾಚಾರ್ಯ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ಅವರು, ಮುಂದಿನ ಸಿಎಂ ವಿಜಯೇಂದ್ರ ಅವರು ಎಂದು ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಿಂದ ನಾವು ಸಂದೇಶ ಕೊಡುತ್ತೇವೆ. ಯಾವುದೇ ದುಷ್ಟ ಶಕ್ತಿ ಬಂದರೂ ಇದನ್ನು ತಡೆಯೋಕೆ ಆಗಲ್ಲ. ವಿಜಯೇಂದ್ರ ಅವರನ್ನು ಮುಂದಿನ ಸಿಎಂ ಆಗಿ ಮಾಡೇ ಮಾಡುತ್ತೇವೆ ಎಂದು ಘೋಷಣೆ ಮಾಡಿದರು.
ಇನ್ನು ಉಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಯಾವುದೇ ದಿಕ್ಸೂಚಿ ಅಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಣ, ಹೆಂಡ ಹಂಚಿ ಗೆದ್ದಿದೆ ಎಂದು ಆರೋಪಿಸಿದರು.