ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ ರಾಜ್ಯದ ರೈತರಿಗೆ ಸುಮಾರು 606.69 ಕೋಟಿ ರೂಪಾಯಿಗೂ ಅಧಿಕ ಹಾಲಿನ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ. ಇದಕ್ಕೆ ಹಣಕಾಸಿನ ಕೊರತೆಯೇ ನೇರ ಕಾರಣ ಎಂದು ಸ್ವತಃ ಪಶುಸಂಗೋಪನಾ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೊಕ್ಕಸ ಬರಿದಾಗಿಸಿಕೊಂಡು ದಿವಾಳಿ ಅಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ಟೀಕಿಸಿದ್ದಾರೆ.
ಓಲೈಕೆ ರಾಜಕಾರಣಕ್ಕಾಗಿ ಶೋಷಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿರುವ ಕಾಂಗ್ರೆಸ್ ಸರ್ಕಾರದಲ್ಲಿ, ರೈತರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ಮತ್ಯಾವ ಓಲೈಕೆಗೆ ಬಳಸಿಕೊಂಡಿದೆಯೋ ತಿಳಿಯದು. ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…