ರಾಜ್ಯ

ಕಾಂಗ್ರೆಸ್‌ ಸರ್ಕಾರ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಇಲ್ಲಿಯವರೆಗೂ ರಾಜ್ಯದ ರೈತರಿಗೆ ಸುಮಾರು 606.69 ಕೋಟಿ ರೂಪಾಯಿಗೂ ಅಧಿಕ ಹಾಲಿನ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ. ಇದಕ್ಕೆ ಹಣಕಾಸಿನ ಕೊರತೆಯೇ ನೇರ ಕಾರಣ ಎಂದು ಸ್ವತಃ ಪಶುಸಂಗೋಪನಾ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬೊಕ್ಕಸ ಬರಿದಾಗಿಸಿಕೊಂಡು ದಿವಾಳಿ ಅಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ಟೀಕಿಸಿದ್ದಾರೆ.

ಓಲೈಕೆ ರಾಜಕಾರಣಕ್ಕಾಗಿ ಶೋಷಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿರುವ ಕಾಂಗ್ರೆಸ್‌ ಸರ್ಕಾರದಲ್ಲಿ, ರೈತರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ಮತ್ಯಾವ ಓಲೈಕೆಗೆ ಬಳಸಿಕೊಂಡಿದೆಯೋ ತಿಳಿಯದು. ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

9 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

9 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

9 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

10 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

10 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

18 hours ago