ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ಧೈರ್ಯ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು.
ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈನಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು. ಅರಸೀಕೆರೆಯ ಐದು ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ ಏಳನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವು ರದ್ದಾಗಿವೆ ಎಂದು ವಿವರಿಸಿದರು.




