ರಾಜ್ಯ

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ಧೈರ್ಯ ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು.

ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈನಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು. ಅರಸೀಕೆರೆಯ ಐದು ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್‌ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ ಏಳನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವು ರದ್ದಾಗಿವೆ ಎಂದು ವಿವರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

4 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

4 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

5 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

5 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

6 hours ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

6 hours ago