ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಎಚ್‌ಡಿಕೆ ಜೊತೆ ವಿಜಯೇಂದ್ರ ಅವರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಜೊತೆ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ಬಿಜೆಪಿ-ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆ ಕೇಳಿದ್ದೇನೆ. ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಹಾಗೂ ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.





