Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಬಿಜೆಪಿಯ ಹಲವು ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ: ಯತ್ನಾಳ್ ಹೊಸ ಬಾಂಬ್

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯೆತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಸೋಲಿಸಲು ಹುನ್ನಾರ ನಡೆಸಿದ್ದರು ಎಂದು ಸೋಮವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ಬೊಮ್ಮಾಯಿ ಮಾತ್ರವಲ್ಲದೆ ಹಲವು ಹಿರಿಯ ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ ನಡೆಸಿದ್ದರು. ಅವರಿಂದ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ ಎಂದುಕ ಕಿಡಿಕಾರಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚನಲಕ್ಕೆ ಕಾರಣವಾಗಿದೆ.

ಇನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ಸ್ಥಾನ ಸಿಗುವವರೆಗೆ ಯಾವುದೇ ಸಭೆಗೆ ಹೋಗದಿರಲು ನಿರ್ಧರಿಸಿರುವ ಬಗ್ಗೆ ಯತ್ನಾಳ್‌ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಹಿಂದಿನ ನಮ್ಮ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಿತ್ತು. ಈಗಿನ ಸರ್ಕಾರ ಇದನ್ನು ಜಾರಿ ಮಾಡಬೇಕಷ್ಟೇ,. ಈ ಬಗ್ಗೆ ಡಿಸೆಂಬರ್‌ ೧೩ ರಂದು ನಡೆಯುವ ಹೋರಾಟದಲ್ಲಿ ನಾನು ಭಾಹವಹಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬಿ.ಎಸ್‌ ಯಡಿಯೂರಪ್ಪ ,ಬಿವೈ ವಿಜಯೇಂದ್ರ ಅವರು ವಿರೋಧ ಬವ್ಯಕ್ತಪಡಿಸಿದ್ದರು. ಮೀಸಲಾತಿ ವಿರೋಧಿಸಿದ ಬಿಎಸ್‌ವೈ ಮತ್ತು ವಿಜಯೇಂದ್ರರನ್ನು ನಮ್ಮ ಸಮಾಜ ಒಪ್ಪಲ್ಲ ಎಂದು ಯತ್ನಾಳ್‌ ಅಸಮಾಧಾನ ಹೊರಹಾಕಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!