ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯೆತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಸೋಲಿಸಲು ಹುನ್ನಾರ ನಡೆಸಿದ್ದರು ಎಂದು ಸೋಮವಾರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ಬೊಮ್ಮಾಯಿ ಮಾತ್ರವಲ್ಲದೆ ಹಲವು ಹಿರಿಯ ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ ನಡೆಸಿದ್ದರು. ಅವರಿಂದ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ ಎಂದುಕ ಕಿಡಿಕಾರಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚನಲಕ್ಕೆ ಕಾರಣವಾಗಿದೆ.
ಇನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ಸ್ಥಾನ ಸಿಗುವವರೆಗೆ ಯಾವುದೇ ಸಭೆಗೆ ಹೋಗದಿರಲು ನಿರ್ಧರಿಸಿರುವ ಬಗ್ಗೆ ಯತ್ನಾಳ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಹಿಂದಿನ ನಮ್ಮ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಿತ್ತು. ಈಗಿನ ಸರ್ಕಾರ ಇದನ್ನು ಜಾರಿ ಮಾಡಬೇಕಷ್ಟೇ,. ಈ ಬಗ್ಗೆ ಡಿಸೆಂಬರ್ ೧೩ ರಂದು ನಡೆಯುವ ಹೋರಾಟದಲ್ಲಿ ನಾನು ಭಾಹವಹಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬಿ.ಎಸ್ ಯಡಿಯೂರಪ್ಪ ,ಬಿವೈ ವಿಜಯೇಂದ್ರ ಅವರು ವಿರೋಧ ಬವ್ಯಕ್ತಪಡಿಸಿದ್ದರು. ಮೀಸಲಾತಿ ವಿರೋಧಿಸಿದ ಬಿಎಸ್‌ವೈ ಮತ್ತು ವಿಜಯೇಂದ್ರರನ್ನು ನಮ್ಮ ಸಮಾಜ ಒಪ್ಪಲ್ಲ ಎಂದು ಯತ್ನಾಳ್ ಅಸಮಾಧಾನ ಹೊರಹಾಕಿದರು.
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…