ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.
ಇನ್ನು ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಿದ್ದು, 224 ಕ್ಷೇತ್ರಗಳಲ್ಲಿ ಹೋರಾಟ ನಡೆಯಲಿದೆ. ನಾಳೆಯಿಂದ ಧರ್ಮದ ಉಳಿವಿಗಾಗಿ ಧರ್ಮಯುದ್ಧ ನಡೆಯಲಿದೆ ಎಂದು ಹೇಳಿದರು.
ಇನ್ನು ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದರು.





