ರಾಜ್ಯ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಬಿಜೆಪಿಯಿಂದ ಮುಂದಿನ 1 ವಾರ ಹೋರಾಟಕ್ಕೆ ನಿರ್ಧಾರ ಎಂದ ವಿಜಯೇಂದ್ರ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.

ಇನ್ನು ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಿದ್ದು, 224 ಕ್ಷೇತ್ರಗಳಲ್ಲಿ ಹೋರಾಟ ನಡೆಯಲಿದೆ. ನಾಳೆಯಿಂದ ಧರ್ಮದ ಉಳಿವಿಗಾಗಿ ಧರ್ಮಯುದ್ಧ ನಡೆಯಲಿದೆ ಎಂದು ಹೇಳಿದರು.

ಇನ್ನು ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

12 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

13 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

13 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

13 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago