Mysore
15
broken clouds

Social Media

ಗುರುವಾರ, 22 ಜನವರಿ 2026
Light
Dark

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ ಮತ್ತು ಟೀಂ

bjp vijayendra

ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ.

ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್‌, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ, ಹರೀಶ್‌ ಪೂಂಜಾ, ಪ್ರತಾಪ್‌ ಸಿಂಹ ನಾಯಕ್‌ ಸೇರಿದಂತೆ ಹಲವರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನೆ ಮಾಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು. ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಎಂದು ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.

ತನಿಖೆ ನಡೆಯುವ ವೇಳೆ ಅನೇಕ ಗೊಂದಗಲಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಅಪಪ್ರಚಾರದ ಬಗ್ಗೆ ಕಡಿವಾಣ ಹಾಕುವ ಕೆಲಸ ಆಗಬೇಕು. ಆದರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Tags:
error: Content is protected !!