bjp vijayendra
ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ.
ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನೆ ಮಾಡಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು. ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಎಂದು ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.
ತನಿಖೆ ನಡೆಯುವ ವೇಳೆ ಅನೇಕ ಗೊಂದಗಲಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಅಪಪ್ರಚಾರದ ಬಗ್ಗೆ ಕಡಿವಾಣ ಹಾಕುವ ಕೆಲಸ ಆಗಬೇಕು. ಆದರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…