Mysore
26
clear sky

Social Media

ಶನಿವಾರ, 31 ಜನವರಿ 2026
Light
Dark

ವಿನಯ್‌ ಆತ್ಮಹತ್ಯೆ ಪ್ರಕರಣ| ಸರ್ಕಾರ ಈ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪಾರದರ್ಶಕ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಒತ್ತಾಯಿಸಿದ್ದಾರೆ.

ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ ಆಗ್ರಹಪಡಿಸುತ್ತದೆ ಎಂದಿದ್ದಾರೆ.

ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.

ಇನ್ನು ಶನಿವಾರ(ಏಪ್ರಿಲ್‌.5) ಕೊಡಗಿನಲ್ಲಿರುವ ವಿನಯ್‌ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ ಸ್ವಾಂತನ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

 

 

Tags:
error: Content is protected !!