ಬೆಂಗಳೂರು: ಗೊಡ್ಡು ಬೆದರಿಕೆಗಳ ಮೂಲಕ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಹಗೂ ಮುಡಾ ಹಗರಣದ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಕುಟುಂಬ 14 ನಿವೇಶನಗಳನ್ನು ಮುಡಾಕ್ಕೆ ವಾಪಸ್ ಕೊಡಬೇಕು. ಬಡವರಿಗೆ ಹಂಚಿಕೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಲೋಕಸಭಾ ಚುನಾವಣೆಯಲ್ಲೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಮದ್ಯ ಖರೀದಿ ಮಾಡಿದ್ದನ್ನೂ ಇ.ಡಿ ಉಲ್ಲೇಖಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.




