ರಾಜ್ಯ

ಗೊಡ್ಡು ಬೆದರಿಕೆ ಮೂಲಕ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಗೊಡ್ಡು ಬೆದರಿಕೆಗಳ ಮೂಲಕ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಹಗೂ ಮುಡಾ ಹಗರಣದ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಕುಟುಂಬ 14 ನಿವೇಶನಗಳನ್ನು ಮುಡಾಕ್ಕೆ ವಾಪಸ್‌ ಕೊಡಬೇಕು. ಬಡವರಿಗೆ ಹಂಚಿಕೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಲೋಕಸಭಾ ಚುನಾವಣೆಯಲ್ಲೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಮದ್ಯ ಖರೀದಿ ಮಾಡಿದ್ದನ್ನೂ ಇ.ಡಿ ಉಲ್ಲೇಖಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

7 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

9 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

9 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

10 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

10 hours ago