ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಾಧ್ಯಕ್ಷರ ಹೆಸರು ಬದಲಾವಣೆ ಆಗುವ ಸಾಧ್ಯತೆಯಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ರಾಜ್ಯಾಧ್ಯಕ್ಷರ ಹೆಸರನ್ನು ಫೈನಲ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ರಾಜ್ಯಾಧ್ಯಕ್ಷ ಗಾದಿ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.
ಈ ಬೆನ್ನಲ್ಲೇ ಇಂದು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಹೈಕಮಾಂಡ್. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಹಲವು ಹೋರಾಟಗಳನ್ನು ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ. ವಿಜಯೇಂದ್ರ ಸಮರ್ಥ ನಾಯಕರಾಗಿದ್ದು, ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.





