ರಾಜ್ಯ

ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್‌ ಗೌಡ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆ ನಡೆಯುವಾಗ ಹೆಚ್ಚಿಗೆ ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರ ಬೇಡಿಕೆಯನ್ನು ಒಪ್ಪಲು ಆಗಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

19 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago