ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದ್ದು ಆತ್ಮಹತ್ಯೆ ಅಲ್ಲವೇ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಈಗ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ.
ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದೆ.
ಈ ಬೆನ್ನಲ್ಲೇ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ವಿನಯ್ ಸೋಮಯ್ಯದ್ದು ಆತ್ಮಹತ್ಯೆ ಅಲ್ಲ. ಅದೊಂದು ಕೊಲೆ ಎಂದರು.
ಇನ್ನು ಈ ಘಟನೆ ಹಿಂದೆ ಯಾವೆಲ್ಲಾ ದುಷ್ಟ ಶಕ್ತಿಗಳು ಇವೆ ಎಂದು ಎಲ್ಲರಿಗೂ ಗೊತ್ತಿದೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.





