ರಾಜ್ಯ

ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮರಣೋತ್ತರ ಪರಿಕ್ಷೆ ವರದಿ ಹೆಣ್ಣೂರು ಠಾಣೆ ಪೊಲೀಸರ ಕೈಸೇರಿದ್ದು ತನಿಖೆ ಚುರುಕುಗೊಳಿಸಿದ್ದಾರೆ.

ವಿನಯ್ ಅವರು ಆತಹತ್ಯೆ ಮಾಡಿಕೊಂಡಿರುವ ನಿಖರವಾದ ಸಮಯ, ಯಾವ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದು ಮೃತದೇಹದ ಸ್ಥಿತಿ ಹೇಗಿತ್ತು. ಎಂಬಿತ್ಯಾದಿ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ವರದಿಯಲ್ಲಿರುವ ಅಂಶಗಳನ್ನು ಆಧರಿಸಿ ಪೊಲೀಸರು ವಿಶ್ಲೇಷಣೆ ಮಾಡುತ್ತಿದ್ದಾರೆ. ವಿನಯ್ ಸೋಮಯ್ಯ ಅವರು ಆತಹತ್ಯೆಗೂ ಮುನ್ನ ಯಾವ ಸಮಯದಲ್ಲಿ ತಮ್ಮ ಮೊಬೈಲ್ ನಲ್ಲಿ ವಾಟ್ಸಪ್‍ಮೆಸೇಜ್ ಹಾಕಿದ್ದಾರೆ ಎಂಬುವುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅವರ ಮೊಬೈಲ್‍ನ್ನು ವಶಪಡಿಸಿಕೊಂಡಿರುವ ಪೊಲೀಸರು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದ್ದು ಅದರ ವರದಿಗಾಗಿ ಕಾಯುತ್ತಿದ್ದಾರೆ.

ಇನ್ನೆರಡು ದಿನಗಳಲ್ಲಿ ಎಫ್‍ಎಸ್‍ಎಲ್ ವರದಿ ಬರಲಿದ್ದು, ಅದರಲ್ಲಿರುವ ಅಂಶಗಳನ್ನು ಪರಿಗಣಿಸಿ ಪೊಲೀಸರು ಮತ್ತಷ್ಟು ಮಾಹಿತಿಗಳನ್ನು ಕಲೆಹಾಕಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಿದ್ದಾರೆ.

ವಿನಯ್ ಸೋಮಯ್ಯ ಅವರು ನಾಗವಾರದ ತಮ್ಮ ಕಚೇರಿಯಲ್ಲಿ ಕಳೆದ ಐದು ದಿನಗಳ ಹಿಂದೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್‍ನೋಟ್ ಹಾಕಿದ್ದರು. ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

4 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

4 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

4 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

4 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

4 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

4 hours ago