ಬೆಂಗಳೂರು: ಇನ್ನು ಮುಂದೆ ನಗರದ ರಸ್ತೆಗಳಲ್ಲಿ ಡಬಲ್ ಡೆಕರ್ ಬಸ್‌ಗಳು ಓಡಾಡಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜನರನ್ನು ಕೊಂಡುಯ್ಯುವ ಸಾಮರ್ಥ್ಯವಿರುವ ಎರಡಂತಸ್ತಿನ ಬಸ್‌ಗಳು ರಸ್ತೆಗಿಳಿಯಲಿವೆ.
ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಟ್ಟು 10 ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸುಗಳ ಖರೀದಿಗೆ ಗ್ರೀನ್ ಸಿಗ್ನಲ್ ದೊರೆತಿದ್ದು, ಜಿ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಅತೀ ಶೀಘ್ರದಲ್ಲಿ ಡಬಲ್ ಡೆಕ್ಕರ್ ಬಸ್‌ಗಳು ಬೆಂಗಳೂರಿನಲ್ಲಿ ಸಂಚಾರ ಪ್ರಾರಂಭಿಸಲಿವೆ.