ರಾಜ್ಯ

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ : ಕಠಿಣ ಕ್ರಮ

ಬೆಂಗಳೂರು : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ
ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ
ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕರಾದ ದೇವರಾಜು ಮಾರ್ಗದರ್ಶನದಲ್ಲಿ, ಶ್ರೀ ಇಂಡಸ್ಟ್ರೀಸ್, ನಂಜನಗೂಡಿನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು
ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಈ ಕೆಳಗಿನ ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ:

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

ಕರ್ನಾಟಕ ಕೃಷಿ ಇಲಾಖೆಯು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಗುಣಮಟ್ಟದ ರಸಗೊಬ್ಬರ ಮತ್ತು ಕೀಟನಾಶಕಗಳ ಲಭ್ಯತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ. ರಾಜ್ಯದಾದ್ಯಂತ ಕಂದಾಯ ಮತ್ತು ಕೃಷಿ ಅಧಿಕಾರಿಗಳು ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ರೈತರಿಗೆ ನಿಗದಿತ ಬೆಲೆಯಲ್ಲಿ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು ಇಲಾಖೆಯು ಕಟಿಬದ್ಧವಾಗಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

55 mins ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

1 hour ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

1 hour ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

1 hour ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

12 hours ago