ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸಿಎಸ್ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಂಡಿದ್ದಾರೆ.





