ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸಿತ್ತು. ಅದರ ಫಲವಾಗಿ ಕನ್ನಡ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಮತ್ತೆ ಮತ್ತೆ ಕನ್ನಡವನ್ನು ಪರೀಕ್ಷೆಗಳಿಂದ ಕೈಬಿಡುವ ಪ್ರಯತ್ನಗಳನ್ನು ಕರವೇ ಗಮನಿಸುತ್ತಿದೆ. ಕೇವಲ ಕೆಲವು ದಿನಗಳ ಹಿಂದೆಯಷ್ಟೇ ರೈಲ್ವೇ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ, ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ನಾವು ಗಟ್ಟಿಯಾಗಿ ಒತ್ತಾಯಿಸಿದ್ದೆವು. ರೈಲ್ವೇ ಸಚಿವರಾದ ಸೋಮಣ್ಣನವರೂ ಸಹ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಿದ್ದರು.
ಆದರೆ ಇದು ನಡೆದು ಕೇವಲ ಕೆಲವು ದಿನಗಳಲ್ಲೇ ಮತ್ತೆ ಕನ್ನಡವನ್ನು ಕೈಬಿಟ್ಟು ಪರೀಕ್ಷೆಗಳನ್ನು ನಡೆಸಲು ರೈಲ್ವೇ ಇಲಾಖೆ ಮುಂದಾಗಿದೆ. ಇದು ಕನ್ನಡಿಗರ ಸ್ವಾಭಿಮಾನವನ್ನು ಮತ್ತೆ ಮತ್ತೆ ಕೆಣಕುವಂತಹ ಅಪಮಾನಕಾರಿ ಕ್ರಮವಾಗಿದೆ. ಇದು ಕೇವಲ ಭಾಷಾ ಅನ್ಯಾಯವಲ್ಲ, ಕನ್ನಡಿಗರ ಹಕ್ಕುಗಳ ಮೇಲಿನ ನೇರ ಆಕ್ರಮಣವಾಗಿದೆ.
ರೈಲ್ವೇಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೂ ಕಡ್ಡಾಯವಾಗಿ ನಡೆಸಬೇಕು. ಕನ್ನಡಿಗರು ಇನ್ನೊಂದು ಭಾಷೆಯನ್ನು ಕಲಿತು ಪರೀಕ್ಷೆ ಬರೆಯಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಕರವೇ ಎಂದಿಗೂ ಒಪ್ಪುವುದಿಲ್ಲ. ಈ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ, ಕರವೇ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳನ್ನು ಆಯೋಜಿಸಲಿದೆ. ರೈಲ್ವೇ ಕಚೇರಿಗಳ ಮುಂದೆ ಧರಣಿ, ಬಂದ್, ರಸ್ತೆ ತಡೆ, ಹಾಗೂ ಅಗತ್ಯವಿದ್ದರೆ ಹೋರಾಟದ ತೀವ್ರ ಸ್ವರೂಪಗಳನ್ನು ತೆಗೆದುಕೊಳ್ಳಲು ಸಿದ್ಧವಿದೆ. ಕನ್ನಡಿಗರ ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಕರವೇ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು…
ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು…
ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…
ರಮೇಶ್ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…