ರಾಜ್ಯ

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸಿತ್ತು. ಅದರ ಫಲವಾಗಿ ಕನ್ನಡ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಮತ್ತೆ ಮತ್ತೆ ಕನ್ನಡವನ್ನು ಪರೀಕ್ಷೆಗಳಿಂದ ಕೈಬಿಡುವ ಪ್ರಯತ್ನಗಳನ್ನು ಕರವೇ ಗಮನಿಸುತ್ತಿದೆ. ಕೇವಲ ಕೆಲವು ದಿನಗಳ ಹಿಂದೆಯಷ್ಟೇ ರೈಲ್ವೇ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ, ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ನಾವು ಗಟ್ಟಿಯಾಗಿ ಒತ್ತಾಯಿಸಿದ್ದೆವು. ರೈಲ್ವೇ ಸಚಿವರಾದ ಸೋಮಣ್ಣನವರೂ ಸಹ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಿದ್ದರು.

ಆದರೆ ಇದು ನಡೆದು ಕೇವಲ ಕೆಲವು ದಿನಗಳಲ್ಲೇ ಮತ್ತೆ ಕನ್ನಡವನ್ನು ಕೈಬಿಟ್ಟು ಪರೀಕ್ಷೆಗಳನ್ನು ನಡೆಸಲು ರೈಲ್ವೇ ಇಲಾಖೆ ಮುಂದಾಗಿದೆ. ಇದು ಕನ್ನಡಿಗರ ಸ್ವಾಭಿಮಾನವನ್ನು ಮತ್ತೆ ಮತ್ತೆ ಕೆಣಕುವಂತಹ ಅಪಮಾನಕಾರಿ ಕ್ರಮವಾಗಿದೆ. ಇದು ಕೇವಲ ಭಾಷಾ ಅನ್ಯಾಯವಲ್ಲ, ಕನ್ನಡಿಗರ ಹಕ್ಕುಗಳ ಮೇಲಿನ ನೇರ ಆಕ್ರಮಣವಾಗಿದೆ.

ರೈಲ್ವೇಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೂ ಕಡ್ಡಾಯವಾಗಿ ನಡೆಸಬೇಕು. ಕನ್ನಡಿಗರು ಇನ್ನೊಂದು ಭಾಷೆಯನ್ನು ಕಲಿತು ಪರೀಕ್ಷೆ ಬರೆಯಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಕರವೇ ಎಂದಿಗೂ ಒಪ್ಪುವುದಿಲ್ಲ. ಈ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ, ಕರವೇ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳನ್ನು ಆಯೋಜಿಸಲಿದೆ. ರೈಲ್ವೇ ಕಚೇರಿಗಳ ಮುಂದೆ ಧರಣಿ, ಬಂದ್, ರಸ್ತೆ ತಡೆ, ಹಾಗೂ ಅಗತ್ಯವಿದ್ದರೆ ಹೋರಾಟದ ತೀವ್ರ ಸ್ವರೂಪಗಳನ್ನು ತೆಗೆದುಕೊಳ್ಳಲು ಸಿದ್ಧವಿದೆ. ಕನ್ನಡಿಗರ ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಕರವೇ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago