virat kohli
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ನಡೆದ ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ.
ಈ ಕುರಿತು ಆರ್‌ಸಿಬಿ ಸೋಷಿಯಲ್ ಮೀಡಿಯಾ ಪೇಜ್ ಮೂಲಕ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
ಜೂನ್.4ರಂತಹ ಹೃದಯಾಘಾತಕ್ಕೆ ಜೀವನದಲ್ಲಿ ಯಾವುದೂ ನಿಮ್ಮನ್ನು ನಿಜವಾಗಿಯೂ ಸಿದ್ಧಪಡಿಸುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅದು ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿದೆ.
ಇದನ್ನು ಓದಿ:ಸೌರವ್ ಗಂಗೂಲಿಗೆ ಮುಖ್ಯ ಕೋಚ್ ಹುದ್ದೆ
ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ.
ಒಟ್ಟಾಗಿ ನಾವು ಎಚ್ಚರಿಕೆಯಿಂದ, ಗೌರವದಿಂದ ಹಾಗೂ ಜವಾಬ್ದಾರಿಯಿಂದ ಮುಂದುವರಿಯುತ್ತೇವೆ ಎಂದು ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೆಬ್‌ಸೈಟ್ ಮೂಲಕ ಹೇಳಿದ್ದಾರೆ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಳೆದ ಜೂನ್.4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…