Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

chndrashekar swamiji

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶರಾಗಿದ್ದಾರೆ.

ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ ವಿಧಿವಶರಾಗಿದ್ದಾರೆ.

ಶ್ರೀಗಳ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಇನ್ನು ಚಂದ್ರಶೇಖರನಾಥ ಶ್ರೀಗಳ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ.

ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರ ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

Tags:
error: Content is protected !!