chndrashekar swamiji
ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶರಾಗಿದ್ದಾರೆ.
ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ ವಿಧಿವಶರಾಗಿದ್ದಾರೆ.
ಶ್ರೀಗಳ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಇನ್ನು ಚಂದ್ರಶೇಖರನಾಥ ಶ್ರೀಗಳ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ.
ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರ ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ…