ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು.
ಇನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೂ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ, ಮಳೆ ಹಾನಿ ಸಂಬಂಧ ಕಟ್ಟೆಚ್ಚರ ಹಾಗೂ ತೀವ್ರ ನಿಗಾ ವಹಿಸಬೇಕು. ತಕ್ಷಣ ಪರಿಹಾರ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು.





