Mysore
30
few clouds

Social Media

ಶನಿವಾರ, 14 ಮಾರ್ಚ್ 2026
Light
Dark

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರರನ್ನ ಗೆಲ್ಲಿಸಿ: ಸಿಎಂ ಮನವಿ

ಮಂಡ್ಯ : ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ನೀಡಿದ ಮತದಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್​ಗೆ ಟಿಕೆಟ್ ಕೊಡಬೇಕಾ ಅಂತಾ ತಿಕ್ಕಾಟ ಶುರುವಾಗಿದೆ. ಯಾರಿಗೆ ಕೊಟ್ಟರೂ ಈ ಬಾರಿ ಬಿಜೆಪಿ-ಜೆಡಿಎಸ್ ಗೆಲ್ಲಲ್ಲ. ಅಪವಿತ್ರ ಮೈತ್ರಿಯನ್ನ ಜನರು ಒಪ್ಪಲ್ಲ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರರನ್ನ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಹೆಚ್.ಡಿ.ಕುಮಾರಸ್ವಾಮಿಗೆ ನಾವು ಅಧಿಕಾರ ಕೊಟ್ಟಿದ್ದೆವು. ಆದರೆ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಕುಳಿತು ಅಧಿಕಾರ ಕಳೆದುಕೊಂಡರು. ಸಮ್ಮಿಶ್ರ ಸರ್ಕಾರ ಕೆಡವಿದ ಯಡಿಯೂರಪ್ಪ ಜತೆ ಕೈಜೋಡಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!