Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮತಗಳ್ಳತನ ಆರೋಪ : ರಾಹುಲ್‌ ಪ್ರತಿಭಟನೆಗೆ ಎಚ್‌ಡಿ ಕುಮಾರಸ್ವಾಮಿ ಕಿಡಿ

rahul gandi hd kumar swami

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಚಿವರು, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

Tags:
error: Content is protected !!