rahul gandi hd kumar swami
ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…