rahulgandhi
ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ.
ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡಿದರೆ ನಮಗೆ ಈ ಬಗ್ಗೆ ತನಿಖೆ ನಡೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.
ಆಗಸ್ಟ್.7ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿನ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಚುನಾವಣಾ ಅಕ್ರಮಗಳ ದಾಖಲೆಗಳನ್ನು ಪರದೆಯೊಂದರಲ್ಲಿ ಪ್ರದರ್ಶಿಸಿದರು.
ಚುನಾವಣಾ ಆಯೋಗದ ಮೇಲೆ ಗುರುತರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈವರೆಗೂ ಅಧಿಕೃತವಾಗಿ ದೂರು ನೀಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ರಾಜ್ಯ ಚುನಾವಣಾಧಿಕಾರಿಗೆ ಮನವಿ ಪತ್ರ ನೀಡಿ ಕ್ರಮ ಜರುಗಿಸುವಂತೆ ಕೋರಿದ್ದಾರೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…