ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್ ಅವರು, ರಾಹುಲ್ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳುವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ ಎಂದು ಹೇಳಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಷ್ಮಣ್ ಅವರು, ತನಿಖೆ ಬಳಿಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ. ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರು 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.





