ರಾಜ್ಯ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ: ಎಂ.ಲಕ್ಷ್ಮಣ್‌ ಆರೋಪ

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್‌ ಅವರು, ರಾಹುಲ್‌ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್‌ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳುವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಷ್ಮಣ್‌ ಅವರು, ತನಿಖೆ ಬಳಿಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ. ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರು 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

13 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

23 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

1 hour ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago