rahul gandhi (1)
ಬೆಂಗಳೂರು : ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಶುಕ್ರವಾರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ದೂರು ನೀಡಿದ್ದಾರೆ.
ಫ್ರೀಡಂಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ 5 ಪ್ರಶ್ನೆಗಳನ್ನು ಕೇಳಿದರು. ಮತದಾನ ಮಾಡಿರುವವರ ಡಿಜಿಟಲ್ ಪ್ರತಿಯನ್ನು ನೀಡದಿರುವುದೇಕೆ? ವಿಡಿಯೋ ಸಾಕ್ಷ್ಯಗಳನ್ನು ನಾಶ ಪಡಿಸಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯ ಸಾಮೂಹಿಕ ವಂಚನೆಯಲ್ಲಿ ಭಾಗಿಯಾಗಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕರನ್ನು ಬೆದರಿಸುತ್ತಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಏಜೆಂಟ್‌ನಂತೆ ವರ್ತಿಸುತ್ತಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣಾ ಆಯೋಗ ತಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ರಾಹುಲ್‌ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದರು.
ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ ರಾಹುಲ್‌ಗಾಂಧಿ ತಮ್ಮ ಆರೋಪಕ್ಕೆ ಪೂರ್ವಕವಾಗಿ ದಾಖಲಾತಿಗಳನ್ನು ನೀಡಿದ್ದಲ್ಲದೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಆಯೋಗದ ಅಧಿಕಾರಿಗಳು ರಾಹುಲ್‌ಗಾಂಧಿ ಅವರಿಗೆ ತಮ್ಮ ಆರೋಪಗಳನ್ನು ಪ್ರಮಾಣ ಪತ್ರದ ಮಾದರಿಯಲ್ಲಿ ನೀಡುವಂತೆ ಕೇಳಿದ್ದಾರೆ. ಆದರೆ ಅದಕ್ಕೆ ರಾಹುಲ್‌ಗಾಂಧಿ ನಿರಾಕರಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…