ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಗುರುವಾರ ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.
ರಾಹುಲ್ ಹೇಳಿದ್ದೇನು?
ನಾವು ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ದುಕೊಂಡು ಆಳವಾದ ಅಧ್ಯಯನ ನಡೆಸಿದೆವು. ಈ ವೇಳೆ ದೊಡ್ಡ ಪ್ರಮಾಣ ಚುನಾವಣಾ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಈ ಭಯಂಕರ ಮತ ಕಳ್ಳತನದ ಕಾರ್ಯ ವಿಧಾನವನ್ನು ಶೀಘ್ರದಲ್ಲೇ ಯಥವತ್ತಾಗಿ ಚುನಾವಣಾ ಆಯೋಗ ಮತ್ತು ಜನರ ಮುಂದಿಡುತ್ತೇವೆ ಎಂದು ಹೇಳಿದ್ದರು.





