ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತು; ಬಿ.ವೈ.ವಿಜಯೇಂದ್ರ ಸಂತಸ

ಬೆಂಗಳೂರು: ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಲೋಕಸಭಾ ಚುನಾವಣೆ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ೧೯ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಧ್ಯೆಯೂ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ 19 ಕ್ಷೇತ್ರಗಳನ್ನು ಗೆದ್ದಿರುವುದು ಮೈತ್ರಿ ನಾಯಕರ ಸಂತೋಷಕ್ಕೆ ಕಾರಣವಾಗಿದೆ.

ಈ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ನೂತನ 19 ಸಂಸದರಿಗೆ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು. ಸಮಾರಂಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದ್ದು, ಕಾಂಗ್ರೆಸ್ ಸಚಿವರ ಕ್ಷೇತ್ರಗಳಲ್ಲೇ ಬಿಜೆಪಿ ಹೆಚ್ಚು ಹೆಚ್ಚು ಲೀಡ್ ಪಡೆದಿದೆ. ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳ ಮಧ್ಯೆ ನಾವು 19 ಕ್ಷೇತ್ರಗಳನ್ನು ಗೆದ್ದಿದ್ದೇವೆ. ಜನರು ಬಿಟ್ಟಿ ಭಾಗ್ಯಗಳಿಂದ ಬೇಸತ್ತು ಹೋಗಿದ್ದಾರೆ. ಆದ್ದರಿಂದಲೇ ನಮ್ಮ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಗೆಲುವು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.