ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ.
ಗುರುವಾರ, ಏಪ್ರಿಲ್ 9ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಲು ಮುಂದಾಗಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿ ಪಕ್ಷವು ಎಸ್‌ಟಿ ನಾಯಕ ಶ್ರೀನಿವಾಸ ದಾಸ ಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ. ಎಸ್‌ಡಿಐಪಿ ಕೂಡ ಕಣದಲ್ಲಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದರೆ, ಬಿಜೆಪಿ ಪಕ್ಷವು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಮೇ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…