ರಾಜ್ಯ

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ.

ಗುರುವಾರ, ಏಪ್ರಿಲ್ 9ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಜನರು ಸಾಲುಗಟ್ಟಿ ನಿಂತು ಮತ ಚಲಾಯಿಸಲು ಮುಂದಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿ ಪಕ್ಷವು ಎಸ್‌ಟಿ ನಾಯಕ ಶ್ರೀನಿವಾಸ ದಾಸ ಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ. ಎಸ್‌ಡಿಐಪಿ ಕೂಡ ಕಣದಲ್ಲಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದರೆ, ಬಿಜೆಪಿ ಪಕ್ಷವು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಮೇ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago